
ಬೆಂಗಳೂರು: ರಾಜ್ಯದಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದ್ದು, 18 ಜಿಲ್ಲೆಗಳಲ್ಲಿ ಶೇಕಡ 100ರಷ್ಟು ಅಂತರ್ಜಲ ಮಟ್ಟ ಏರಿಕೆ ಕಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ದಾವಣಗೆರೆ, ಧಾರವಾಡ, ಚಿತ್ರದುರ್ಗ, ಹಾಸನ, ಚಾಮರಾಜನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಿದೆ ಎಂದರು.
125 ತಾಲ್ಲೂಕುಗಳಲ್ಲಿ ನಾಲ್ಕು ಮೀಟರ್ ನಷ್ಟು, 39 ತಾಲೂಕುಗಳಲ್ಲಿ ಎರಡರಿಂದ ನಾಲ್ಕು ಮೀಟರ್ ನಷ್ಟು ಹಾಗೂ 26 ತಾಲ್ಲೂಕುಗಳಲ್ಲಿ 0 -2 ರಷ್ಟು ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.