ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನವದೆಹಲಿಯಲ್ಲಿ ಪ್ರತಿಭಟನೆ ಕೈಗೊಂಡಿದ್ದ ರೈತರ ಕುರಿತು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವಹೇಳನಕಾರಿ ಮಾತುಗಳನ್ನಾಡಿದ್ದರೆಂಬ ಕಾರಣಕ್ಕೆ ಅವರ ಕೆನ್ನೆಗೆ ಬಾರಿಸಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗುರಿಯಾಗಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಮಾಜಿ ಉದ್ಯೋಗಿ ಈಗ ಮತ್ತೊಂದು ಹೇಳಿಕೆ ನೀಡಿದ್ದಾರೆ.
ಘಟನೆ ಕುರಿತಂತೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನನ್ನ ತಾಯಿಯೂ ಸಹ ಅಂದಿನ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಂತಹ ಸಂದರ್ಭದಲ್ಲಿ ಪ್ರತಿಭಟನಾನಿರತರ ಕುರಿತು ನಟಿ ಕಂಗನಾ ಅವಹೇಳನಕಾರಿಯಾಗಿ ಮಾತನಾಡಿದ್ದು ಇದು ನನ್ನಲ್ಲಿ ಆಕ್ರೋಶ ಹುಟ್ಟು ಹಾಕಿತ್ತು ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಿಂದ ಈಗ ಅಮಾನತುಗೊಂಡಿರುವ ಕುಲ್ವಿಂದರ್ ಕೌರ್ ಹೇಳಿದ್ದಾರೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಿಂದ ಅಮಾನತುಗೊಂಡಿರುವ ಕುರಿತಂತೆ ಪ್ರಶ್ನಿಸಿದಾಗ, ತಾಯಿಯ ಗೌರವಕ್ಕಾಗಿ ಇಂತಹ ಸಾವಿರ ಉದ್ಯೋಗಗಳನ್ನು ಕಳೆದುಕೊಳ್ಳಲು ನಾನು ಸಿದ್ದ ಎಂದು ಕುಲ್ವಿಂದರ್ ಕೌರ್ ಉತ್ತರಿಸಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆಯಾಗಿರುವ ಕಂಗನಾ ರಣಾವತ್, ಚಂಡಿಗಢ ವಿಮಾನ ನಿಲ್ದಾಣಕ್ಕೆ ಬಂದ ವೇಳೆ CISF ಉದ್ಯೋಗಿ ಕುಲ್ವಿಂದರ್ ಕಪಾಳ ಮೋಕ್ಷ ಮಾಡಿದ್ದರು.