ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಶ್ರಾಂತಿ ಇಲ್ಲದೆ ಸತತವಾಗಿ ವಾಹನ ಚಲಾಯಿಸುವ ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಪ್ರಥಮ ಹಂತದಲ್ಲಿ ಒಂದು ಸಾವಿರ ಸುಸಜ್ಜಿತ ವಿಶ್ರಾಂತಿ ಗೃಹಗಳನ್ನು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಮಿಸಲಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಶುಕ್ರವಾರದಂದು ನವದೆಹಲಿಯಲ್ಲಿ ನಡೆದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಮಾತನಾಡುವ ವೇಳೆ ಈ ವಿಷಯ ತಿಳಿಸಿದ ಅವರು, ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಚಲಾಯಿಸುವ ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗೆ ವಿಶ್ರಾಂತಿ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.
2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಈವರೆಗೆ 21 ಕೋಟಿ ಪ್ರಯಾಣಿಕ ವಾಹನಗಳು ಮಾರಾಟವಾಗಿವೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿಯವರು, ಈ ಪೈಕಿ 12 ಲಕ್ಷ ಎಲೆಕ್ಟ್ರಿಕ್ ವಾಹನಗಳು ಎಂದು ತಿಳಿಸಿದರು.