ಜನಪ್ರತಿನಿಧಿಗಳ ದ್ವೇಷ ಭಾಷಣ ಕುರಿತಂತೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ನೀಡಿದ್ದು, ಅಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೂ ಸೂಚಿಸಿದೆ. ಇದರ ಮಧ್ಯೆ ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಒಂದನ್ನು ಬಿಡುಗಡೆ ಮಾಡಿದೆ.
ಇದರ ಅನುಸಾರ ದೇಶದ 4,768 ಸಂಸದ/ಶಾಸಕರ ಪೈಕಿ 107 ಜನಪ್ರತಿನಿಧಿಗಳ ವಿರುದ್ಧ ದ್ವೇಷ ಭಾಷಣದ ಪ್ರಕರಣ ದಾಖಲಾಗಿರುವುದನ್ನು ಗುರುತಿಸಲಾಗಿದ್ದು, ಈ ಒಟ್ಟು ಪ್ರಕರಣಗಳಲ್ಲಿ ಶೇಕಡ 40ರಷ್ಟು ಪ್ರಕರಣಗಳು ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ ದಾಖಲಾಗಿರುವುದಾಗಿ ಎಡಿಆರ್ ತನ್ನ ವರದಿಯಲ್ಲಿ ತಿಳಿಸಿದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಪ್ರಕಾರ, ದ್ವೇಷ ಭಾಷಣ ಪ್ರಕರಣ ದಾಖಲಾಗಿರುವ 107 ಜನಪ್ರತಿನಿಧಿಗಳ ಪೈಕಿ, ಬಿಜೆಪಿಯ 42, ಕಾಂಗ್ರೆಸ್ ನ 15, ಆಮ್ ಆದ್ಮಿ ಪಾರ್ಟಿಯ 7, ಡಿಎಂಕೆ, ಸಮಾಜವಾದಿ ಪಕ್ಷ ಹಾಗೂ ವೈಎಸ್ಆರ್ ಕಾಂಗ್ರೆಸ್ ನಿಂದ ತಲಾ 5, ಆರ್ಜೆಡಿ ಯ 4 ಮಂದಿ ಇದ್ದಾರೆ. ಅಭ್ಯರ್ಥಿಗಳು ಘೋಷಿಸಿಕೊಂಡಿರುವ ಅಫಿಡವಿಟ್ ಗಳ ಆಧಾರದಲ್ಲಿ ಈ ವಿಶ್ಲೇಷಣೆ ನಡೆಸಲಾಗಿದೆ.