alex Certify ಬಾಕಿ ವೇತನ ಪಾವತಿ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರ: ನೌಕರರ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಕಿ ವೇತನ ಪಾವತಿ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರ: ನೌಕರರ ಎಚ್ಚರಿಕೆ

ಬೆಂಗಳೂರು: ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು 10 ದಿನದಲ್ಲಿ ಈಡೇರಿಸದಿದ್ದರೆ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ ಎಚ್ಚರಿಕೆ ನೀಡಿದೆ.

ಸಂಘದ ಅಧ್ಯಕ್ಷ ಶಂಕರ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆರೋಗ್ಯ ಕವಚ 108 ಆಂಬುಲೆನ್ಸ್ ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ. ಇದರಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿದೆ. 10 ದಿನದಲ್ಲಿ ಬಾಕಿ ವೇತನ ಪಾವತಿಸದಿದ್ದರೆ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ಆರೋಗ್ಯ ಇಲಾಖೆ ಆಯುಕ್ತರು ಸಭೆ ನಡೆಸಿ 30,008 ರೂಪಾಯಿ ಕನಿಷ್ಠ ವೇತನ ನಿಗದಿ ಮಾಡಲಾಗಿತ್ತು. ಆರು ತಿಂಗಳು ಮಾತ್ರ ಈ ವೇತನ ನೀಡಿ ನಂತರ ಏಕಾಏಕಿ 6,000 ರೂ. ಕಡಿತಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ವೇತನ ಕಡಿತ ಮಾಡಬಾರದು. ಬಾಕಿ ವೇತನ ಪಾವತಿ ಸೇರಿ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...