ಬೆಂಗಳೂರು: ಕೊರೊನಾ ಲಾಕ್ ಡೌನ್ ಬೆನ್ನಲ್ಲೇ ಬಸ್ ಸಂಚಾರಕ್ಕೆ ಬ್ರೇಕ್, ವೇತನ ಪಾವತಿ ಇಲ್ಲದೇ ಸಂಕಷ್ಟಕ್ಕೀಡಾಗಿದ್ದ ಬಿಎಂಟಿಸಿ ಸಿಬ್ಬಂದಿಗಳನ್ನು ಕೋವಿಡ್ ಇನ್ನಿಲ್ಲದಂತೆ ಹೈರಾಣಾಗಿಸಿದೆ. ಕೊರೊನಾ ಅಟ್ಟಹಾಸಕ್ಕೆ 109 ಸಿಬ್ಬಂದಿಗಳು ಬಲಿಯಾಗಿದ್ದಾರೆ ಎಂದು ಬಿಎಂಟಿಸಿ ಉಪಾಧ್ಯಕ್ಷ ಎಂ.ಆರ್. ವೆಂಕಟೇಶ್ ತಿಳಿಸಿದ್ದಾರೆ.
ಕೊರೊನಾ ಮೊದಲ ಅಲೆಯಲ್ಲಿ 38 ಬಿಎಂಟಿಸಿ ಸಿಬ್ಬಂದಿ ಬಲಿಯಾಗಿದ್ದಾರೆ. ಎರಡನೇ ಅಲೆಗೆ 69 ಬಿಎಂಟಿಸಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಕೋವಿಡ್ ನಿಂದ ಒಟ್ಟು 109 ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಆದರೆ ಪರಿಹಾರ ವಿತರಣೆಯಲ್ಲಿ ಕೊಂಚ ವಿಳಂಬವಾಗಿದೆ ಎಂದು ಹೇಳಿದರು.
ಮತ್ತೆ ದರ ಹೆಚ್ಚಳದ ಶಾಕ್; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ – ಚೆನ್ನೈನಲ್ಲಿ 100, ಜೈಪುರದಲ್ಲಿ 105 ರೂ.ಗಿಂತಲೂ ಅಧಿಕ ದರ
ಮಾತುಕೊಟ್ಟಂತೆ ಮೃತಪಟ್ಟವರಿಗೆ 30 ಲಕ್ಷ ಪರಿಹಾರ ನೀಡಲಾಗುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ವರ್ಷ ನಾಲ್ವರು ಸಿಬ್ಬಂದಿಗೆ ಪರಿಹಾರ ನೀಡಿದ್ದೇವೆ. ಆದರೆ ಇನ್ನುಳಿದ ಪರಿಹಾರ ನೀಡಲು ಕಾನೂನು ತೊಡಕಿದೆ ಎಂದು ಹೇಳಿದರು.