ಥಾಣೆ: ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಥಾಣೆಯ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 63 ಜನ ಬಾಲಕಿಯರು ಸೇರಿ ಒಟ್ಟು 109 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂತ ಗಡ್ಗೆ ಮಹಾರಾಜ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡ ಇಬ್ಬರು ವಿದ್ಯಾರ್ಥಿಗಳು ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ಮಧ್ಯಾಹ್ನ ಊಟಕ್ಕೆ ಫಲಾವ್ ಹಾಗೂ ಜಾಮೂನ್ ನೀದಲಾಗಿತ್ತು. ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಕೆಲ ಹೊತ್ತಲೇ ಅನಾರೋಗ್ಯಕ್ಕೀಡಾಗಿದ್ದಾರೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.