alex Certify 11 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪಾದ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

11 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪಾದ್ರಿ

11 ವರ್ಷದ ಬಾಲಕಿ ಮೇಲೆ ಚರ್ಚ್ ಪಾದ್ರಿಯೊಬ್ಬರು ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾಗ್ಪಾತ್ ಜಿಲ್ಲೆಯ ಚಂಡಿ ನಗರದಲ್ಲಿ ನಡೆದಿದೆ.

ನನ್ನ ಮಗಳು ಸೈಕಲ್ ಮೇಲೆ ಚರ್ಚಿಗೆ ಹೋಗಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಪಾದ್ರಿ ಅಲ್ಬರ್ಟ್ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ತಾಯಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲದೆ ಈ ಕುರಿತು ಯಾರಿಗೂ ತಿಳಿಸಿದಂತೆ ಪಾದ್ರಿ ಅಲ್ಬರ್ಟ್ ಬೆದರಿಕೆ ಹಾಕಿದ್ದರೆನ್ನಲಾಗಿದ್ದು, ಆದರೆ ಅಳುತ್ತಾ ಬಂದ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ ವೇಳೆ ವಿಷಯ ಬಹಿರಂಗವಾಗಿದೆ.

ಇದೀಗ ಪೋಷಕರ ದೂರಿನ ಅನ್ವಯ ಪಾದ್ರಿ ಅಲ್ಬರ್ಟ್ ನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ನೀರಜ್ ಜಾದೂನ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...