alex Certify ಟ್ರ್ಯಾಕ್ಟರ್ ಪಲ್ಟಿಯಾಗಿ ಘೋರ ದುರಂತ: 4 ಮಕ್ಕಳು ಸೇರಿ 11 ಸಾವು; ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರ್ಯಾಕ್ಟರ್ ಪಲ್ಟಿಯಾಗಿ ಘೋರ ದುರಂತ: 4 ಮಕ್ಕಳು ಸೇರಿ 11 ಸಾವು; ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ನಾಲ್ಕು ಮಕ್ಕಳು ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ ಎಂದು ಎಸ್‌ಎಸ್‌ಪಿ ಶಿವಹರಿ ಮೀನಾ ತಿಳಿಸಿದ್ದಾರೆ.

ಝಾನ್ಸಿಯ ಚಿರ್ಗಾಂವ್ ಪ್ರದೇಶದ ಭಂದರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಟ್ರಾಕ್ಟರ್ ಒಟ್ಟು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು, ಈ ಅಪಘಾತ ಸಂಭವಿಸಿದಾಗ ಭಕ್ತರಿದ್ದರು. ಜಾನುವಾರುಗಳಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಟ್ರ್ಯಾಕ್ಟರ್ ರಸ್ತೆ ಬದಿಯಲ್ಲಿ ಉರುಳಿ ಬಿದ್ದಿದೆ. ಅಧಿಕಾರಿಗಳ ಪ್ರಕಾರ, ಅಪಘಾತದಲ್ಲಿ ಒಟ್ಟು ಆರು ಜನರು ಗಾಯಗೊಂಡಿದ್ದಾರೆ.

ಎಸ್‌ಎಸ್‌ಪಿ ಶಿವಹರಿ ಮೀನಾ ಅವರು, ಮಧ್ಯಪ್ರದೇಶದ ಪಾಂಡೋಖರ್‌ನಿಂದ ಬಂದ ಸುಮಾರು 30 ಮಂದಿ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ದೇಗುಲಕ್ಕೆ ಹೋಗುತ್ತಿದ್ದರು. ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ ಒಟ್ಟು 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಗಾಯಗೊಂಡ ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್, ದುರಂತದ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ಜನರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅವರು ಜಿಲ್ಲಾಡಳಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...