ಕೈರೋ: ಈಜಿಪ್ಟ್ ರಾಜಧಾನಿ ಕೈರೋ ಉತ್ತರ ಭಾಗದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 11 ಜನ ಸಾವನ್ನಪ್ಪಿದ್ದು 100 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಈಜಿಪ್ಟ್ ಆರೋಗ್ಯ ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ.
ರಾಜಧಾನಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ನೈಲ್ ಡೆಲ್ಟಾದ ಸಣ್ಣ ಪಟ್ಟಣವಾದ ಟೌಕ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಕೈರೋದಿಂದ ಮನ್ಸೌರಾಕ್ಕೆ ಸಂಚರಿಸುತ್ತಿದ್ದ ರೈಲಿನ 4 ಬೋಗಿಗಳು ಹಳಿತಪ್ಪಿದ ಪರಿಣಾಮ ದುರಂತ ಸಂಭವಿಸಿದೆ.
ಸ್ಥಳಕ್ಕೆ 12 ಕ್ಕೂ ಅಧಿಕ ಅಂಬುಲೆನ್ಸ್ ಗಳನ್ನು ತಕ್ಷಣಕ್ಕೆ ರವಾನಿಸಲಾಗಿದ್ದು, ಗಾಯಾಳುಗಳನ್ನು ರಕ್ಷಿಸಲಾಗಿದೆ ಸೇನೆಯ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ದುರಂತದ ಕುರಿತಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.