
ಮಧ್ಯಪ್ರದೇಶದ ಬೇತುಲ್ ನಲ್ಲಿ ಬಸ್ ಮತ್ತು ಎಸ್‌ಯುವಿ ನಡುವೆ ಡಿಕ್ಕಿಯಾಗಿ 11 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಡ್ಗಾಂವ್ ಮತ್ತು ಭೈಸ್ದೇಹಿ ನಡುವೆ ಅಪಘಾತ ಸಂಭವಿಸಿದೆ. ಶುಕ್ರವಾರ ನಸುಕಿನಲ್ಲಿ ಈ ದಾರುಣ ಘಟನೆ ನಡೆದಿದ್ದು, ರಸ್ತೆ ಅಪಘಾತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ.
ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಮಧ್ಯಪ್ರದೇಶದ ಬೇತುಲ್‌ನ ಜಲ್ಲಾರ್ ಪೊಲೀಸ್ ಠಾಣೆ ಬಳಿ ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಒಬ್ಬ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೇತುಲ್ ಎಸ್ಪಿ ಸಿಮಲಾ ಪ್ರಸಾದ್ ತಿಳಿಸಿದ್ದಾರೆ.