ಬೆಂಗಳೂರು :ಕಾಡುಪ್ರಾಣಿ ದಾಳಿಯಿಂದ ರಾಜ್ಯದಲ್ಲಿ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ‘ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಒಟ್ಟು 11 ಮಂದಿ ಸಾವನ್ನಪ್ಪಿದ್ದಾರೆ. ಮಾನವ ಪ್ರಾಣಿ ಸಂಘರ್ಷದ ಬಗ್ಗೆ ಚರ್ಚೆ ಮಾಡಿದ್ದೇವೆ’ ಎಂದು ಹೇಳಿದರು.
ಇತ್ತೀಚೆಗೆ ರಾಜ್ಯದಲ್ಲಿ ಮಾನವ ಮತ್ತು ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿರುವ ಹಿನ್ನಲೆ ಇಂದು ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.