alex Certify ಆಸ್ಪತ್ರೆ ಆವರಣದಲ್ಲಿ 11 ತಲೆ ಬುರುಡೆ, ಭ್ರೂಣಗಳ ಎಲುಬು ಪತ್ತೆ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆ ಆವರಣದಲ್ಲಿ 11 ತಲೆ ಬುರುಡೆ, ಭ್ರೂಣಗಳ ಎಲುಬು ಪತ್ತೆ…..!

ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿನ ಕದಂ ಎಂಬ ಆಸ್ಪತ್ರೆಯ ಆವರಣದಲ್ಲಿ ತಲೆ ಬುರುಡೆ ಹಾಗೂ ಭ್ರೂಣಗಳ ಎಲುಬು ಪತ್ತೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ.

ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಿಸಿದ್ದ ಪ್ರಕರಣವನ್ನು ಪೊಲೀಸರು ಬೇಧಿಸುತ್ತಿದ್ದ ಸಂದರ್ಭದಲ್ಲಿ ಈ ಸಂಗತಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯೆ ರೇಖಾ ಕದಂ(38), ನರ್ಸ್ ಗಳಾದ ಸಂಗೀತಾ ಕಾಳೆ ಹಾಗೂ ಪೂಜಾ ಧಾಟ್ ಎಂಬುವವರನ್ನು ಬಂಧಿಸಲಾಗಿದೆ.

17 ವರ್ಷದ ಅಪ್ರಾಪ್ತ ಬಾಲಕನೊಬ್ಬ 13 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ್ದ. ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದಳು. ಹೀಗಾಗಿ ಬಾಲಕನ ಕುಟುಂಬಸ್ಥರು ಕೊಲೆಯ ಬೆದರಿಗೆ ಒಡ್ಡಿ ಬಾಲಕಿಗೆ ಗರ್ಭಪಾತ ಮಾಡಿಸಿದ್ದರು.

ಈ ಕುರಿತು ಅಪ್ರಾಪ್ತ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಪ್ರಕರಣ ಬೆನ್ನಟ್ಟಿದ ಪೊಲೀಸರು ಈ ಕುರಿತು ತನಿಖೆ ಕೈಗೊಂಡಾಗ ಆಸ್ಪತ್ರೆಯ ಆವರಣದಲ್ಲಿ ಭ್ರೂಣಗಳ 54 ಎಲುಬುಗಳು ಹಾಗೂ 11 ತಲೆ ಬುರುಡೆಗಳು ಹೂತಿಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಸದ್ಯ ಸಂತ್ರಸ್ತ ಬಾಲಕಿಯ ಆರೋಗ್ಯ ಸ್ಥಿರವಾಗಿದ್ದು, ಎಲುಬು ಹಾಗೂ ಬರುಡೆಗಳನ್ನು ಫಾರೆನ್ಸಿಕ್ ವಿಶ್ಲೇಷಣೆಗಾಗಿ ಪೊಲೀಸರು ಕಳುಹಿಸಿದ್ದಾರೆ. ಅಲ್ಲದೇ, ಈ ಕುರಿತು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...