![](https://kannadadunia.com/wp-content/uploads/2021/05/Vidhana_Soudha_750_1-1.gif)
ಬೆಂಗಳೂರು : ರಾಜ್ಯದಲ್ಲಿ 2006 ನೇ ಸಾಲಿನ ಏಪ್ರಿಲ್ 1 ಕ್ಕಿಂತ ಮುಂಚೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಪಿಂಚಣಿ ಯೋಜನೆ ಬದಲಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರಲು ಅನುಕೂಲ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ ಎಂದಿದ್ದಾರೆ.
![](https://kannadadunia.com/wp-content/uploads/2024/01/WhatsApp-Image-2024-01-25-at-4.47.15-AM.jpeg)
![](https://kannadadunia.com/wp-content/uploads/2024/01/WhatsApp-Image-2024-01-25-at-4.47.16-AM-1.jpeg)
![](https://kannadadunia.com/wp-content/uploads/2024/01/WhatsApp-Image-2024-01-25-at-4.47.16-AM.jpeg)