alex Certify ಶಾಕಿಂಗ್ ನ್ಯೂಸ್: 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ನೀಡಿದ ಆರೋಗ್ಯ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ನೀಡಿದ ಆರೋಗ್ಯ ಸಿಬ್ಬಂದಿ

ಮುಂಬೈ: 5 ವರ್ಷದೊಳಗಿನ 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲಿಗೆ ಸ್ಯಾನಿಟೈಸರ್ ನೀಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸ್ಯಾನಿಟೈಸರ್ ನೀಡಿದ್ದರಿಂದ ಅಸ್ವಸ್ಥರಾದ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯವತ್ಮಲ್ ಜಿಲ್ಲೆಯ 5 ವರ್ಷದೊಳಗಿನ ಮಕ್ಕಳಿಗೆ ಆರೋಗ್ಯ ಸಿಬ್ಬಂದಿ ಪೋಲಿಯೋ ಲಸಿಕೆ ಹಾಕಬೇಕಿತ್ತು. ಆದರೆ, ಯಡವಟ್ಟು ಮಾಡಿಕೊಂಡ ಸಿಬ್ಬಂದಿ ಲಸಿಕೆಯ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ನೀಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಲೋಪವೆಸಗಿದ ಮೂವರು ಆರೋಗ್ಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...