
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಸೀದಿಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 32 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಉಲ್ಲೇಖಿಸಿ ಸ್ಪುಟ್ನಿಕ್ ವರದಿ ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಆಫ್ಘನ್ ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯೀದ್ ಖೋಸ್ಟಿ ಹೇಳಿದ್ದಾರೆ.
ಕಾಬೂಲ್‌ನ ಜನನಿಬಿಡ ಸ್ಥಳದಲ್ಲಿನ ಈದ್ ಗಾ ಮಸೀದಿಯಲ್ಲಿ ಘಟನೆ ನಡೆದಿದೆ. ಸ್ಫೋಟದಲ್ಲಿ ಅನೇಕ ಸಾವುನೋವುಗಳು ವರದಿಯಾಗಿವೆ. ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆ, ಗುಂಪು ಹೊತ್ತುಕೊಂಡಿಲ್ಲ.