ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಮಂಗಳವಾರ ಬಸ್ ಕಲ್ವರ್ಟ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಲಾಸರ್ನಿಂದ ಬರುತ್ತಿದ್ದ ಬಸ್ ಸಿಕರ್ ಜಿಲ್ಲೆಯ ಲಕ್ಷ್ಮಣಗಢ್ ತಲುಪಿದ ನಂತರ ಕಲ್ವರ್ಟ್ಗೆ ಡಿಕ್ಕಿ ಹೊಡೆದಿದೆ.
ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಲಕ್ಷ್ಮಣಗಢದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಷ್ಮಣಗಢದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಲಾಸರ್ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಲಕ್ಷ್ಮಣಗಢ ಮತ್ತು ಸಿಕರ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಹೇಳಿದ್ದಾರೆ.
ರಾಜಸ್ಥಾನ ಸಿಎಂ ಸಂತಾಪ
ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಅವರು ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.