ಗೋಲಾಘಾಟ್ : ಕಲ್ಲಿದ್ದಲು ತುಂಬಿದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಯಾದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿರುವ ಘಟನೆ ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಗೋಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ರಾಜೇನ್ ಸಿಂಗ್ ಅವರ ಪ್ರಕಾರ, ಇಂದು ಬೆಳಿಗ್ಗೆ ದೇರ್ಗಾಂವ್ ಬಳಿಯ ಬಲಿಜನ್ನಲ್ಲಿ 45 ಜನರಿದ್ದ ಬಸ್ ಸರಕು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಅಸ್ಸಾಂನ ಗೋಲಾಘಾಟ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಾಗಿರುವುದು ನೋವುಂಟು ಮಾಡಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ” ಎಂದು ಪ್ರಧಾನಿ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.