ನವದೆಹಲಿ: ಛತ್ತೀಸ್ ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಬಸ್ ‘ಮುರುಮ್’ ಗುಂಡಿಗೆ ಬಿದ್ದ ಪರಿಣಾಮ ಖಾಸಗಿ ಸಂಸ್ಥೆಯ ಕನಿಷ್ಠ 12 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು 14 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಮ್ಹಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಪ್ರಿ ಗ್ರಾಮದ ಬಳಿ ರಾತ್ರಿ 8:30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸಂತ್ರಸ್ತರೆಲ್ಲರೂ ಕೆಡಿಯಾ ಡಿಸ್ಟಿಲರಿ ಕಂಪನಿಯ ಉದ್ಯೋಗಿಗಳಾಗಿದ್ದು, ಕೆಲಸದಿಂದ ಮನೆಗೆ ಮರಳುತ್ತಿದ್ದರು ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.ಸಿಕ್ಕಿಬಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು. ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ದುರ್ಗ್ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಸುದ್ದಿಗಾರರಿಗೆ ತಿಳಿಸಿದರು.
ಬಸ್ ಕುಮ್ಹಾರಿ ಪ್ರದೇಶದಲ್ಲಿರುವ ಕೆಡಿಯಾ ಡಿಸ್ಟಿಲರೀಸ್ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು. ಈವರೆಗೆ 12 ಜನರ ಸಾವು ದೃಢಪಟ್ಟಿದೆ. ಗಾಯಗೊಂಡ 14 ಜನರಲ್ಲಿ 12 ಜನರನ್ನು ರಾಯ್ಪುರದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ಗೆ ಕರೆದೊಯ್ಯಲಾಗಿದ್ದು, ಇತರ ಇಬ್ಬರು ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.