ಮುಂಬೈನಲ್ಲಿ ಘೋರ ದುರಂತ ಸಂಭವಿಸಿದೆ. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿಯಿಂದ 12 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಮುಂಬೈ ಮಿರಾರ್ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಬೆಳಗಿನ ಜಾವ 3.15 ಐಸಿಯು ವಾರ್ಡ್ನಲ್ಲಿ ಬೆಂಕಿ ದುರಂತ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ. ಆಸ್ಪತ್ರೆಯ ಐಸಿಯುನಲ್ಲಿ 17 ಚಿಕಿತ್ಸೆ ಪಡೆಯುತ್ತಿದ್ದರು. 12 ಮಂದಿ ಸಾವನ್ನಪ್ಪಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ನಾಸಿಕ್ ಘಟನೆ ಬೆನ್ನಲ್ಲೇ ಈ ಘೋರ ದುರಂತ ಸಂಭವಿಸಿದೆ.