ಜಾಗೃತಿ ಹಾಗೂ ಶಿಕ್ಷಣದಿಂದ ಸಮಾಜದ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರಿತು ಸರ್ಕಾರಗಳು ಸಾಕಷ್ಟು ಪ್ರಯತ್ನ ನಡೆಸುತ್ತಿರುವ ನಡೆಯುವ ಅಲ್ಲೊಂದು ಇಲ್ಲೊಂದು ಸಮಾಜವೇ ಗಾಬರಿ ಪಡುವ ಪ್ರಕರಣಗಳು ನಡೆಯುತ್ತಿವೆ.
ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಭಾನುವಾರ ನಡೆದಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಶನಿವಾರ ರಾತ್ರಿ ಜಿಲ್ಲೆಯ ಮಹಾತ್ಮಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಸ್ಕ್ಯಾನ್ನಲ್ಲಿ ಆಕೆ 33 ವಾರಗಳ ಗರ್ಭಿಣಿ ಎಂದು ತಿಳಿದುಬಂದಿದೆ.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿಲೀಪ್ ರೊಕ್ಡಿಯಾ ಈ ಬಗ್ಗೆ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದಿದ್ದಾರೆ.
ಹುಡುಗಿಯನ್ನು ಆಸ್ಪತ್ರೆಗೆ ಕರೆತಂದಾಗ ಅವಳು 33 ವಾರಗಳ ಗರ್ಭಧಾರಣೆಯನ್ನು ಹೊಂದಿದ್ದಳು ಎಂದು ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ನಾವು ಅವಳೊಂದಿಗೆ ಮಾತನಾಡಿದ್ದೇವೆ. ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಆಕೆಗೆ ಅಗತ್ಯ ನೆರವು ನೀಡುತ್ತೇವೆ ಎಂದಿದ್ದಾರೆ.
ವರದಿ ಬಂದ ಕೂಡಲೇ ತಂಡವನ್ನು ರಚಿಸಲಾಗಿದೆ. ಬಾಲಕಿಯನ್ನು ತಜ್ಞರು ಮತ್ತು ಮಹಿಳಾ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಸಿಡಬ್ಲ್ಯೂಸಿ ಕೌನ್ಸೆಲಿಂಗ್ ಅನ್ನು ಸಹ ಕೇಳಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.