alex Certify ಅತ್ತೆಯೊಂದಿಗೆ ಹೊಲಕ್ಕೆ ಹೋದ ಬಾಲಕಿ: ಆಘಾತಕಾರಿ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ತೆಯೊಂದಿಗೆ ಹೊಲಕ್ಕೆ ಹೋದ ಬಾಲಕಿ: ಆಘಾತಕಾರಿ ಕೃತ್ಯ

ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ದಂಕೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅತ್ತೆಯೇ ಕೃತ್ಯಕ್ಕೆ ಸಾಥ್ ನೀಡಿರುವುದು ಗೊತ್ತಾಗಿದೆ.

12 ವರ್ಷದ ಬಾಲಕಿ ತನ್ನ ತಾಯಿಯ ಸಂಬಂಧಿಕರ ಮನೆಗೆ ತೆರಳಿದ್ದು, ಸೋದರತ್ತೆಯ ಜೊತೆಗೆ ಹೊಲಕ್ಕೆ ಹೋಗಿದ್ದಾಳೆ. ಹೊಲದಲ್ಲಿದ್ದ ವ್ಯಕ್ತಿಯೊಬ್ಬನಿಗೆ ಬಾಲಕಿಯನ್ನು ಒಪ್ಪಿಸಿದ್ದು ಕಾಮುಕ ಬಾಲಕಿ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ.

ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಘಟಕದ ಉಪಪೊಲೀಸ್ ಆಯುಕ್ತರಾದ ಬೃಂದಾ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿ, ದಂಕೂರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...