ಬೆಂಗಳೂರು : ಸಕಲಾ ಯೋಜನೆಯಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೇ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಸೇವೆಗಳನ್ನು ಸೇರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಸಚಿವರು ಮಾಹಿತಿ ನೀಡಿದ್ದು, ಹೊಸ ಸೇವೆಗಳೂ ಸೇರಿ ಕೆಲವು ಸೇವೆಗಳು ಇನ್ನೂ ಕಾಗದದ ರೂಪದಲ್ಲಿವೆ. ಮುಂದಿನ 8 ತಿಂಗಳಲ್ಲಿ ಎಲ್ಲಾ ಸೇವೆಗಳೂ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಲಾಗುವುದು ಎಂದು ಹೇಳಿದ್ದಾರೆ.
1202 ಸಕಾಲ ಸೇವೆಗಳ ಪೈಕಿ 922 ನಾಗರಿಕ ಹಾಗೂ 280 ಸಿಬ್ಬಂದಿ ಸೇವೆಗಳನ್ನು ನೀಡಲಾಗುತ್ತಿದೆ. ಆದರೆ, ಈ ಪೈಕಿ 802 ಸೇವೆಗಳನ್ನು ಮಾತ್ರ ಸೇವಾಸಿಂಧು ಆನ್ಲೈನ್ನಲ್ಲಿ ಒದಗಿಸಲಾಗುತ್ತಿದೆ. ಉಳಿದ 120 ಸೇವೆಗಳನ್ನು ಆನ್ಲೈನ್ನಲ್ಲಿ ಒದಗಿಸಲಾಗುತ್ತಿಲ್ಲ. ನಿಗದಿತ ಸೇವೆಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನಸಾಮಾನ್ಯರಿಗೆ ಅವಕಾಶ ಇದೆ. ಆದರೂ ಜನರಿಗೆ ಸಮಸ್ಯೆ ಆಗುತ್ತದೆ. ಆದ್ದರಿಂದ ಅರ್ಜಿಯಿಂದ ಸೇವೆಯವರೆಗೆ ಎಲ್ಲವನ್ನೂ ಡಿಜಿಟಲೀಕರಣಗೊಳಿಸಬೇಕು ಎಂದಿದ್ದಾರೆ.