ಬೆಂಗಳೂರು: 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಕುರಿತಾಗಿ ಕಾನೂನು ತೊಡಕು ನಿವಾರಿಸುವ ಕುರಿತಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸಮಾಲೋಚನೆ ನಡೆಸಿದ್ದಾರೆ.
1242 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವುದು ಮಾತ್ರ ಬಾಕಿ ಇದೆ. ಇದಕ್ಕೆ ಕಾನೂನು ತೊಡಕು ಎದುರಾಗಿದೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿ, ಹೈಕೋರ್ಟ್ ಆದೇಶಗಳ ಅನ್ವಯ ಈ ಬಗ್ಗೆ ಕಾನೂನಿನ ಸಲಹೆ ಪಡೆದುಕೊಳ್ಳಲು ಸಭೆ ನಡೆಸಲಾಗಿದೆ. ಸಭೆಯಲ್ಲಿ ಯಾವುದೇ ತಾರ್ಕಿಕ ನಿರ್ಧಾರ ಕೈಗೊಳ್ಳಲಾಗಿಲ್ಲ. ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರಿ ವಕೀಲರು ಕೂಡ ಸಭೆಯಲ್ಲಿ ಭಾಗವಹಿಸಿದ್ದರು.