alex Certify BREAKING: ಮೈದಾನಕ್ಕೇ ನುಗ್ಗಿದ ಫ್ಯಾನ್ಸ್: ಕಾಲ್ತುಳಿತ, ಹಿಂಸಾಚಾರದಲ್ಲಿ 127 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೈದಾನಕ್ಕೇ ನುಗ್ಗಿದ ಫ್ಯಾನ್ಸ್: ಕಾಲ್ತುಳಿತ, ಹಿಂಸಾಚಾರದಲ್ಲಿ 127 ಜನ ಸಾವು

ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆದ ಹಿಂಸಾಚಾರಕ್ಕೆ 127 ಜನ ಬಲಿಯಾಗಿದ್ದಾರೆ. ಪೂರ್ವ ಜಾವಾದಲ್ಲಿ ದುರ್ಘಟನೆ ನಡೆದಿದೆ.

ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಪೊಲೀಸರು ಮತ್ತು ಫುಟ್ಬಾಲ್ ಅಭಿಮಾನಿಗಳ ನಡುವೆ ವಾಗ್ವಾದ, ಗಲಾಟೆ ನಡೆದು ಹಿಂಸಾಚಾರದಲ್ಲಿ ಇಬ್ಬರು ಪೊಲೀಸರು ಸೇರಿ 127 ಜನ ಸಾವನ್ನಪ್ಪಿದ್ದಾರೆ.

ಪೂರ್ವ ಜಾವಾ ಪ್ರಾಂತ್ಯದಲ್ಲಿ ರಾತ್ರಿಯಿಡೀ ನಡೆದ ಫುಟ್‌ಬಾಲ್ ಪಂದ್ಯವೊಂದರಲ್ಲಿ ಪ್ರೇಕ್ಷಕರ ನೂಕುನುಗ್ಗಲು ಉಂಟಾಗಿ 127 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಬೆಂಬಲಿಗರು ಪಿಚ್‌ಗೆ ನುಗ್ಗಿದರು ಮತ್ತು ಪೊಲೀಸರು ಅಶ್ರುವಾಯು ಹಾರಿಸಿದರು, ಕಾಲ್ತುಳಿತ ಮತ್ತು ಉಸಿರುಗಟ್ಟಿ ಹಲವರು ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಸುದ್ದಿಗಾರರಿಗೆ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...