ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾಗಿರುವ ಹಿನ್ನೆಲೆಯಲ್ಲಿ ಈವರೆಗೆ 18 ಕೋಟಿ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮದ ಅಭಿವೃದ್ಧಿ ಜೊತೆಗೆ ಉದ್ಯೋಗ ಸೃಷ್ಟಿಯೂ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಕ್ತಿ ಯೋಜನೆಯಿಂದಾಗಿ ರಾಜ್ಯದ ಪ್ರವಾಸಿ ತಾಣಗಳಿಗೆ, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಸಹಜವಾಗಿ ಹೆಚ್ಚುತ್ತಿದೆ. ಉದ್ಯೋಗ ಸೃಷ್ಟಿ ಕೂಡ ಆರಂಭವಾಗಿದೆ. ಬಸ್ ಗಳ ಸಮಸ್ಯೆ ನಿವಾರಣೆಗಾಗಿ ಸರ್ಕಾರ 4000 ಬಸ್ ಗಳ ಖರೀದಿಗೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.
ಬಸ್ ಗಳ ಖರೀದಿ ಮಾತ್ರವಲ್ಲ 13 ಸಾವಿರ ಕಂಡಕ್ಟರ್ ಗಳ ಹಾಗೂ ಸಾರಿಗೆ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಶಕ್ತಿ ಯೋಜನೆಯಿಂದ ಕೆ.ಎಸ್.ಆರ್.ಟಿ.ಸಿ ಸುಧಾರಣೆ ಮಾತ್ರವಲ್ಲ, ಉದ್ಯೋಗಾವಕಾಶವೂ ಸಹಜವಾಗಿ ಹೆಚ್ಚುತ್ತಿದೆ ಎಂದು ತಿಳಿಸಿದ್ದಾರೆ.