ಜನರ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ನೋಟಿಸ್ ನೀಡಿದ ನಂತರ 13 ಕಂಪನಿಗಳು ತಮ್ಮ ಜಾಹೀರಾತುಗಳನ್ನು ಹಿಂತೆಗೆದುಕೊಂಡಿವೆ.
ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಮೂರು ಕಂಪನಿಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳಿಗಾಗಿ ದಂಡವನ್ನು ವಿಧಿಸಿದೆ.
ಬಿಐಎಸ್ ಮಾನದಂಡಗಳಿಗೆ ಅನುಗುಣವಾಗಿಲ್ಲದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವುದರ ವಿರುದ್ಧ ಗ್ರಾಹಕರನ್ನು ಎಚ್ಚರಿಸಲು ಮತ್ತು ಎಚ್ಚರಿಕೆ ನೀಡಲು ಸಿಸಿಪಿಎ ಇತ್ತೀಚೆಗೆ ಎರಡು ಸುರಕ್ಷತಾ ಸೂಚನೆ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಗ್ರಾಹಕ ಸಂರಕ್ಷಣಾ ಕಾಯ್ದೆಯ ನಿಬಂಧನೆಗಳನ್ನು ಎತ್ತಿ ತೋರಿಸುವ ಇಂಡಸ್ಟ್ರಿ ಅಸೋಸಿಯೇಷನ್‌ಗಳಿಗೆ ಸಲಹೆಯನ್ನು ನೀಡಲಾಗಿದೆ ಮತ್ತು ಕೊರೋನ ವೈರಸ್ ವಿರುದ್ಧದ ಪರಿಣಾಮಕಾರಿತ್ವದ ಬಗ್ಗೆ ಸುಳ್ಳು ಕ್ಲೈಮ್ ಮಾಡುವುದನ್ನು ನಿಲ್ಲಿಸಲು ಸೂಚಿಸಲಾಗಿದೆ.