ನವದೆಹಲಿ: ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ನಡೆಸುತ್ತಿರುವ 13 ಐಎಎಸ್ ತರಬೇತಿ ಕೇಂದ್ರಗಳಿಗೆ ದೆಹಲಿ ಮುನ್ಸಿಪಾಲಿಟಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಅಲ್ಲದೇ ನಿಯಮಾವಳಿಗಳನ್ನು ಗಾಳಿಗೆ ತೂರಿ ನಡೆಸುತ್ತಿರುವ ತರಬೇತಿ ಕೇಂದ್ರಗಳಿಗೆ ನೋಟೀಸ್ ನೀಡಲಾಗಿದೆ.
ರಾವು ಐಎಎಸ್ ತರಬೇತಿ ಕೇಂದ್ರದ ನೆಲ ಮಾಳಿಗೆಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಪ್ರಕರಣದ ಬಗ್ಗೆ ತನಿಖೆ ಚುರುಕುಗೊಂಡಿದೆ. ಈ ನಡುವೆ ಅಕ್ರಮವಾಗಿ ಐಎಎಸ್ ಕೋಚಿಂಗ್ ಸೆಂಟರ್ ನಡೆಸುತ್ತಿರುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಈಗಾಗಲೇ 13 ಕೋಚಿಂಗ್ ಸೆಂಟರ್ ಗಳಿಗೆ ಬೀಗ ಹಾಕಲಾಗಿದ್ದು, ಅವುಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್,ಕೆರಿಯರ್ ಪವರ್, ವಿದ್ಯಾಗುರು, ಗೈಡನ್ಸ್ ಐಎಎಸ್ ಕೇಂದ್ರಗಳು ಸೇರಿವೆ.