ಗ್ವಾಲಿಯರ್: ಬಸ್ ಮತ್ತು ಆಟೋ ನಡುವೆ ಡಿಕ್ಕಿ ಯಾಗಿ 13 ಜನರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಗ್ವಾಲಿಯರ್ ಪುರಾನಿ ಚವಾನಿ ಸಮೀಪ ನಡೆದ ಭೀಕರ ಅಪಘಾತದಲ್ಲಿ 13 ಜನ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, 10 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ 10 ಮಹಿಳೆಯರು ಮತ್ತು ಆಟೋರಿಕ್ಷಾ ಚಾಲಕ ಸೇರಿದ್ದಾರೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.