alex Certify ಹಾವೇರಿ ಭೀಕರ ಅಪಘಾತದಲ್ಲಿ 13 ಮಂದಿ ಸಾವು ; ಕೇಂದ್ರ ಸಚಿವ H.D ಕುಮಾರಸ್ವಾಮಿ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾವೇರಿ ಭೀಕರ ಅಪಘಾತದಲ್ಲಿ 13 ಮಂದಿ ಸಾವು ; ಕೇಂದ್ರ ಸಚಿವ H.D ಕುಮಾರಸ್ವಾಮಿ ಸಂತಾಪ

ಬೆಂಗಳೂರು : ಹಾವೇರಿಯಲ್ಲಿ ನಡೆದ ಟಿಟಿ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೃತರಿಗೆ ಮಾಜಿ ಸಿಎಂ,  ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಹೆಚ್ಡಿಕೆ ‘ ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊಂದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ. ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ. ಮೃತಪಟ್ಟ ಎಲ್ಲರ ಆತ್ಮಕ್ಕೂ ಚಿರಶಾಂತಿ ಸಿಗಲಿ ಹಾಗೂ ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಲಾರಿ ಚಾಲಕನ ದೋಷಪೂರಿತ ಪಾರ್ಕಿಂಗ್ ಅಪಘಾತಕ್ಕೆ ಕಾರಣ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಚಾಲಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಬಗ್ಗೆ ತೋರುವ ನಿರ್ಲಕ್ಷ್ಯ ಜೀವಕ್ಕೆ ಎರವಾಗುತ್ತಿರುವುದು ನೋವಿನ ಸಂಗತಿ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿ’ ಎಂದು ಆಗ್ರಹಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...