ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು 13 ಲಕ್ಷಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗುವುದು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 50 ಲಕ್ಷ ರೂಪಾಯಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.