ಗಾಝಾ ಪಟ್ಟಿಯ ರಾಫಾದಲ್ಲಿ ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಹಮಾಸ್ ಕದನ ವಿರಾಮ ಷರತ್ತುಗಳನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಈ ದಾಳಿಗಳು ನಡೆದಿವೆ.
ಮೃತ ದೇಹಗಳನ್ನು ಕುವೈತ್ ಆಸ್ಪತ್ರೆಗೆ ಸಾಗಿಸಲಾಗಿದೆ. ರಾತ್ರಿಯಿಡೀ ನಡೆದ ದಾಳಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
ಕಳೆದ ನಾಲ್ಕು ತಿಂಗಳಲ್ಲಿ, ಇಸ್ರೇಲ್ ವಾಯು ಮತ್ತು ನೆಲದ ದಾಳಿಗಳಲ್ಲಿ 27,000 ಕ್ಕೂ ಹೆಚ್ಚು ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ. ಈ ಪ್ರದೇಶದ ಜನಸಂಖ್ಯೆಯ ಕಾಲು ಭಾಗದಷ್ಟು ಜನರು ತೀವ್ರ ಆಹಾರ ಕೊರತೆಯನ್ನು ಎದುರಿಸುತ್ತಿದ್ದಾರೆ. ಹಮಾಸ್ ಅನ್ನು ಸೋಲಿಸುವವರೆಗೂ ದಾಳಿ ಮುಂದುವರಿಯುತ್ತದೆ ಎಂದು ಪ್ರಧಾನಿ ನೆತನ್ಯಾಹು ಹೇಳಿದ್ದಾರೆ.