alex Certify ಗಮನಿಸಿ: ಗುಣಮಟ್ಟವನ್ನೇ ಹೊಂದಿಲ್ಲ 1394 ಔಷಧಗಳು: ಕೇಂದ್ರ ಸರ್ಕಾರ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಗುಣಮಟ್ಟವನ್ನೇ ಹೊಂದಿಲ್ಲ 1394 ಔಷಧಗಳು: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: 1394 ಔಷಧಗಳು ಪ್ರಮಾಣಿತ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮಂಗಳವಾರ ರಾಜ್ಯಸಭೆಗೆ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಲಿಖಿತ ಉತ್ತರ ನೀಡಿದ್ದು, 2023- 24 ರಲ್ಲಿ 1394 ಔಷಧಗಳು ಪ್ರಮಾಣಿತ ಗುಣಮಟ್ಟ ಪರೀಕ್ಷೆಯಲ್ಲಿ ವೈಫಲ್ಯ ಕಂಡಿವೆ. 2019 -20ರಲ್ಲಿ 950, 2022-23 ರಲ್ಲಿ 1171 ಔಷಧಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎಂದು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಘಟನೆ ವರದಿ ನೀಡಿದೆ ಎಂದು ತಿಳಿಸಿದ್ದಾರೆ.

ನಕಲಿ ಹಾಗೂ ಕಲಬರಕೆ ಔಷಧ ಮಾದರಿ ತಯಾರಿಸಿದ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. 2023- 24 ರಲ್ಲಿ ಒಟ್ಟು 1.06 ಲಕ್ಷ ಔಷಧ ಮಾದರಿಗಳನ್ನು ಪರೀಕ್ಷೆಗೆ ಸ್ವೀಕರಿಸಲಾಗಿದ್ದು, ಇವುಗಳಲ್ಲಿ 2988 ಮಾದರಿ ಪ್ರಮಾಣಿತ ಗುಣಮಟ್ಟ ಹೊಂದಿಲ್ಲ. 282 ಮಾದರಿಗಳು ನಕಲಿಯಾಗಿರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...