ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ದೇಶದಲ್ಲಿ ಸುಮಾರು 14 ಕೋಟಿ ಆರೋಗ್ಯ ಐಡಿಗಳನ್ನು ರಚಿಸಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್.ಎಸ್.ಶರ್ಮಾ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಭಾರತೀಯರಿಗೆ ಡಿಜಿಟಲ್ ಆರೋಗ್ಯ ದಾಖಲೆಗಳನ್ನು ರಚಿಸಲು ಮತ್ತು ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಪ್ರಮುಖ ಯೋಜನೆ ಇದಾಗಿದೆ. ಜನರ ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಭಾಗವಾಗಿ ಇದನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 27ರಂದು ಪ್ರಧಾನಿ ಮೋದಿ ಆರಂಭಿಸಿದ ರಾಷ್ಟ್ರೀಯ ಕಾರ್ಯಕ್ರಮ ಉತ್ತಮ ಪ್ರಗತಿ ಸಾಧಿಸಿದ್ದು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೈಲಟ್ ಯೋಜನೆ ಜಾರಿಗೊಳಿಸಲಾಗಿತ್ತು. ಪ್ರತಿ ಭಾರತೀಯರಿಗೆ ವಿಶಿಷ್ಟವಾದ 4 ಅಂಕಿಯ ಆರೋಗ್ಯ ಗುರುತಿನ ಸಂಖ್ಯೆಯನ್ನು ಪಡೆಯುವ ಈ ಕಾರ್ಯಕ್ರಮದ ಮೂಲಕ ಜನರ ಆರೋಗ್ಯದ ದಾಖಲೆಗಳನ್ನು ದಾಖಲಿಸಲಾಗುತ್ತದೆ.
ಜನರ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಅವರ ಒಪ್ಪಿಗೆಯ ಮೇರೆಗೆ ಆರೋಗ್ಯ ಸಿಬ್ಬಂದಿ ಮತ್ತು ವೈದ್ಯರು ಪರಿಶೀಲಿಸಬಹುದಾಗಿದೆ ಎಂದು ಹೇಳಲಾಗಿದೆ.