alex Certify ಬಹುಮಹಡಿ ಕಟ್ಟಡದಲ್ಲಿ ಭಾರಿ ಸ್ಪೋಟ: 14 ಮಂದಿ ಸಾವು, 100 ಜನರಿಗೆ ಗಾಯ; ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಘೋರ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಹುಮಹಡಿ ಕಟ್ಟಡದಲ್ಲಿ ಭಾರಿ ಸ್ಪೋಟ: 14 ಮಂದಿ ಸಾವು, 100 ಜನರಿಗೆ ಗಾಯ; ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಘೋರ ದುರಂತ

ಢಾಕಾ: ಬಾಂಗ್ಲಾದೇಶದ ಢಾಕಾದ ಗುಲಿಸ್ತಾನ್ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದು, ಸುಮಾರು 100 ಜನ ಗಾಯಗೊಂಡಿದ್ದಾರೆ.

ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 11 ಅಗ್ನಿಶಾಮಕ ಸೇವೆಗಳ ತುರ್ತು ಘಟಕಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

ಜನನಿಬಿಡ ಸಿದ್ದಿಕ್ ಬಜಾರ್‌ನಲ್ಲಿರುವ ಈ ಕಟ್ಟಡವು ಹಲವಾರು ಕಚೇರಿಗಳು ಮತ್ತು ಮಳಿಗೆಗಳನ್ನು ಹೊಂದಿರುವ ವಾಣಿಜ್ಯ ಕಟ್ಟಡವಾಗಿದೆ. ಏಳು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ನೈರ್ಮಲ್ಯ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...