ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹರಿದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಸ್ ನಿಲ್ದಾಣದಲ್ಲಿ ನಲ್ಲಿ ನಡೆದಿದೆ.
14 ವರ್ಷದ ಪ್ರಜ್ವಲ್ ಮೃತ ಬಾಲಕ. ಬಸ್ ಚಲಿಸುತ್ತಿರುವ ಸಮಯದಲ್ಲಿ ಮುಂದಿನ ಬಾಗಿಲಿನಿಂದ ಇಳಿಯುವಾಗ ಬಾಲಕ ಕೆಳೆಗೆ ಬಿದ್ದಿದ್ದಾನೆ. ಪರಿಣಾಮ ಬಸ್ ಹಿಂಬದಿಯ ಚಕ್ರ ಬಾಲಕನ ಹೊಟ್ಟೆಯ ಮೇಲೆ ಹರಿದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರು, ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಯಾಸ್ಮಿನ್ ತಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.