ಬೆಂಗಳೂರು : ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು SCSP – TSP ಯೋಜನೆಯ 14 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಬಳಕೆ ಮಾಡಿಕೊಂಡಿದೆ.
ಹೌದು. ಎಸ್ಸಿಎಸ್ಪಿ ಮತ್ತು ಟಿಎಸ್ಪಿಗೆ ಬಜೆಟ್ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ14,282 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಸರ್ಕಾರ ಅನುಮತಿ ನೀಡಿದೆ.
ಯುವನಿಧಿ – 175 ಕೋಟಿ ರೂ , ಶಕ್ತಿ ಯೋಜನೆಗೆ 1451 ಕೋಟಿ ರೂ, ಗೃಹ ಲಕ್ಷ್ಮೀ ಯೋಜನೆಗೆ 7,881 ಕೋಟಿ ರೂ, ಅನ್ನಭಾಗ್ಯ ಯೋಜನೆಗೆ – 2,187 ಕೋಟಿ ರೂ. ಹಾಗೂ ಗೃಹ ಜ್ಯೋತಿ ಯೋಜನೆಗೆ 2,585 ಕೋಟಿ ರೂ. ಹಣ ಬಳಕೆ ಮಾಡಿದೆ.
ಶೋಷಿತ ವರ್ಗದ ಜನರ ಬದುಕಲ್ಲಿ ಬದಲಾವಣೆ ತರುವುದೇ ನಮ್ಮ ಆದ್ಯತೆ
ಇಡೀ ದೇಶದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಹಣ ಖರ್ಚು ಮಾಡುತ್ತಿರುವುದು ನಮ್ಮ ಸರ್ಕಾರ ಮಾತ್ರ. ಎಸ್ಸಿ.ಎಸ್.ಪಿ / ಟಿ.ಎಸ್.ಪಿ ಗೆ ಬಜೆಟ್ನಲ್ಲಿ ಘೋಷಿಸಿದ ಅನುದಾನವನ್ನು ಆಯಾಯ ವರ್ಷವೇ ಶೇ 100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಮಾಡಿದ್ದು ನಾವೇ. ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ನಿಯಮವನ್ನೂ ಮಾಡಿದ್ದೇವೆ. ಅನುದಾನ ಬಳಕೆ ಮಾಡದೆ ಯಾರು ನಿರ್ಲಕ್ಷ್ಯ ಮಾಡುತ್ತಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶೋಷಿತ ವರ್ಗದ ಜನರ ಬದುಕಲ್ಲಿ ಬದಲಾವಣೆ ತರುವುದೇ ನಮ್ಮ ಆದ್ಯತೆ. ಇದರಲ್ಲಿ ಯಾವ ರಾಜಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.