alex Certify BIG NEWS : ಶಿವಮೊಗ್ಗದಲ್ಲಿ ಗಲಭೆ ಪ್ರಕರಣ : ನಗರದಾದ್ಯಂತ ಮುಂದುವರಿದ 144 ಸೆಕ್ಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಿವಮೊಗ್ಗದಲ್ಲಿ ಗಲಭೆ ಪ್ರಕರಣ : ನಗರದಾದ್ಯಂತ ಮುಂದುವರಿದ 144 ಸೆಕ್ಷನ್

ಶಿವಮೊಗ್ಗ : ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ‍ದಂತೆ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಮುಂದುವರಿದಿದೆ.

ರಾಗಿಗುಡ್ಡ ಶಾಂತಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಒಂದು ರೀತಿಯಲ್ಲಿ ಶಿವಮೊಗ್ಗ ಬೂದಿ ಮುಚ್ಚಿದ ಕೆಂಡದಂತಾಗಿದೆ. ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಮುಂದುವರಿದಿದೆ.

ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 24 ಎಫ್ಐಆರ್ ದಾಖಲಿಸಲಾಗಿದೆ. ಇದುವರೆಗೆ 60 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಗಲಾಟೆ ವೇಳೆ ಕಲ್ಲೆಸೆತದಿಂದಾಗಿ 7 ಮನೆಗಳ ಗಾಜು ಪುಡಿಪುಡಿಯಾಗಿದೆ. 144 ಸೆಕ್ಷನ್ ಜಾರಿ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯುತ್ತಿಲ್ಲ. ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...