ಮುಂದಿನ 15ರಿಂದ 20 ದಿನಗಳಲ್ಲಿ ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಶಿವಸೇನೆ ಉದ್ದವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ.
ಸದ್ಯದಲ್ಲೇ ಏಕನಾಥ್ ಶಿಂಧೆ ಬಣದ ಶಾಸಕರ ಅನರ್ಹತೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಹೊರಬೀಳಲಿದ್ದು, ಆ ಬಳಿಕ ಸರ್ಕಾರ ಪತನವಾಗಲಿದೆ ಎಂದ ಅವರು, ಈ ಕುರಿತು ಬಿಜೆಪಿ ನಾಯಕರು ಏನು ಹೇಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ ಎಂದು ವ್ಯಂಗ್ಯವಾಡಿದರು.
ಮಹಾರಾಷ್ಟ್ರದಲ್ಲಿ ಈ ಮೊದಲು ಶಿವಸೇನೆ, ಕಾಂಗ್ರೆಸ್, ಎನ್ ಸಿ ಪಿ ಮೈತ್ರಿಕೂಟದ ಸರ್ಕಾರ ಅಧಿಕಾರದಲ್ಲಿದ್ದು, ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದರು. ಆ ಸಂದರ್ಭದಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದ ಕೆಲವು ಶಾಸಕರು ಬಳಿಕ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದು, ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ.