ರಾಜ್ಯದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಬೆಂಗಳೂರು ಆಸುಪಾಸು ಸೇರಿದಂತೆ ಚಿರತೆಗಳು ಕಾಣಿಸಿಕೊಂಡಿದ್ದವು. ಅಲ್ಲದೆ ಚಿರತೆಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ ಬಳಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಆಸುಪಾಸು ಸೇರಿದಂತೆ ನಗರ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವ ವಿಚಾರವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅದರ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಅಲ್ಲದೆ ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದ್ದು, 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.