ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕು ಆರಗೋಡನಹಳ್ಳಿಯಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್. ರಾಜಣ್ಣ ಈ ಕುರಿತು ಮಾಹಿತಿ ನೀಡಿದ್ದು, ಕಾಡು ಹಂದಿ ದಾಳಿಯಿಂದ ರೈತರೊಬ್ಬರು ಮೃತಪಟ್ಟು, ಇಬ್ಬರು ಮಹಿಳೆಯರು ಗಾಯಗೊಂಡಿರುವುದು ಬೇಸರದ ಸಂಗತಿ ಆಗಿದೆ. ಮೃತ ರೈತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಅರಣ್ಯ ಇಲಾಖೆಯಿಂದಲೇ ಭರಿಸಲಾಗುವುದು. ಅವರು ಗುಣಮುಖರಾದ ನಂತರ ಮಾಸಿಕ ಭತ್ಯೆ 2 ರಿಂದ 4 ಸಾವಿರ ನೀಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.