ತಮಿಳುನಾಡಿನ ಕಡಲೂರುನಲ್ಲಿ 15 ವರ್ಷದ ಬಾಲಕಿ ಮೇಲೆ 6 ತಿಂಗಳ ಕಾಲ 5 ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
19 ರಿಂದ 21 ವರ್ಷದ ಐದು ಮಂದಿ ಆರೋಪಿಗಳು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಎನ್. ಧೀನಾ, ಎಸ್. ವಿಘ್ನೇಶ್, ವಿ. ಹೊನೆಸ್ಟ್ರಾಜ್ ಅವರನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಆರೋಗ್ಯದ ಹದಗೆಟ್ಟಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯ ಚಿಕ್ಕಪ್ಪ ಆರೋಗ್ಯ ಸರಿ ಇಲ್ಲದ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ.
ಬಾಲಕಿಯ ತಂದೆ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದರಿಂದ ಸಂತ್ರಸ್ಥೆ ಕಡಲೂರಿನ ಚಿಕ್ಕಪ್ಪನ ಮನೆಯಲ್ಲಿ ತಂಗಿದ್ದಳು. ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಲಾಗಿದೆ. ರಂಜಿತ್ ಮತ್ತು ರಾಗಾ ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.