
ತುಮಕೂರು: ಶಾಲಾ ಮಟ್ಟದ ಕ್ರಿಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕತೋಟುಕೆರೆ ಗ್ರಾಮದಲ್ಲಿ ನಡೆದಿದೆ.
ಬೆಳದಾರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ 15 ವರ್ಷದ ಭೀಮಾಶಂಕರ್ ಮೃತ ಬಾಲಕ. ವಿದ್ಯಾರ್ಥಿ 4 X 100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿದ್ದ. ದ್ವಿತೀಯ ಸ್ಥಾನದಲ್ಲಿ ಗೆದ್ದಿದ್ದ. ಮೊದಲ ಸ್ಥಾನದಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಅಸಮಾಧಾನಗೊಂಡಿದ್ದ.
ಕ್ರೀಡಾಕೂಟ ಮುಗಿದ ಬಳಿಕ ಶಿಕ್ಷಕರು ವಾಪಸ್ ಗ್ರಾಮಕ್ಕೆ ತೆರಳಲು ವಾಹನ ಹತ್ತುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ. ಈ ವೇಳೆ ಏಕಾಏಕಿ ಕುಸಿದು ಬಿದ್ದ ವಿದ್ಯಾರ್ಥಿ ಭೀಮಾಶಂಕರ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದ. ಹೃದಯ ಸ್ತಂಭನದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾಗಿ ವೈದ್ಯರು ಹೇಳಿದ್ದಾರೆ ಎಂದು ಶಾಲಾ ಶಿಕ್ಷಕರು ಮಾಹಿತಿ ನೀಡಿದ್ದಾರೆ.