ನವದೆಹಲಿ: ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗೆ ಸುಮಾರು 1,500 ರೈತರು ಮತ್ತು ಅವರ ಸಂಗಾತಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.
ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ಗೆ ವಿಶೇಷ ಅತಿಥಿಗಳಾಗಿ ರೈತರನ್ನು ಆಹ್ವಾನಿಸಲಾಗಿದೆ. ದೇಶಾದ್ಯಂತ ಸುಮಾರು 1,500 ರೈತರು ಮತ್ತು ಅವರ ಸಂಗಾತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈತ ಉತ್ಪಾದಕರ ಸಂಸ್ಥೆಗಳ(ಎಫ್‌ಪಿಒ) ರೈತ ಪ್ರತಿನಿಧಿಗಳು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಮತ್ತು ಸೂಕ್ಷ್ಮ ನೀರಾವರಿ ಯೋಜನೆಗಳ ಫಲಾನುಭವಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪರೇಡ್ ನಂತರ ಕೃಷಿ ಸಚಿವ ಅರ್ಜುನ್ ಮುಂಡಾ ರೈತರಿಗೆ ಊಟದ ವ್ಯವಸ್ಥೆ ಮಾಡಲಿದ್ದಾರೆ. ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಸುಮಾರು 500 ರೈತರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು.