ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕುವೈತ್ ಸರ್ಕಾರವು 15,000 ಡಾಲರ್ (ಅಂದಾಜು 12.50 ಲಕ್ಷ ರೂ.) ಪರಿಹಾರವನ್ನು ನೀಡಲಿದೆ. ವಲಸೆ ಕಾರ್ಮಿಕರು ವಾಸಿಸುತ್ತಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು 46 ಭಾರತೀಯರು ಸೇರಿದಂತೆ 50 ಜನರು ಸಾವನ್ನಪ್ಪಿದ್ದರು.
ಜೂನ್ 12 ರಂದು ದಕ್ಷಿಣ ಕುವೈತ್ ಮಂಗಾಫ್ನಲ್ಲಿರುವ ಏಳು ಅಂತಸ್ತಿನ ಕಟ್ಟಡದಲ್ಲಿ ನೆಲ ಮಹಡಿಯಲ್ಲಿರುವ ಗಾರ್ಡ್ ಕೋಣೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಟ್ಟಡದಲ್ಲಿ 196 ವಲಸೆ ಕಾರ್ಮಿಕರು ವಾಸಿಸುತ್ತಿದ್ದರು.
ವರದಿಯ ಪ್ರಕಾರ, ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆದೇಶದ ಮೇರೆಗೆ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು. ಪರಿಹಾರ ಪಾವತಿಗಳನ್ನು ಪ್ರಕ್ರಿಯೆಗೊಳಿಸಲಾಗುವುದು ಮತ್ತು ಭಾರತ ಸೇರಿದಂತೆ ಆಯಾ ರಾಯಭಾರ ಕಚೇರಿಗಳಿಗೆ ತಲುಪಿಸಲಾಗುವುದು ಎಂದು ಕುವೈತ್ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.