ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಆರೋಗ್ಯ ಇಲಾಖೆಗೆ ಒಟ್ಟು 15,145 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಉತ್ತಮ ಆರೋಗ್ಯಯುತ ಸಮಾಜ ನಿರ್ಮಾಣಕ್ಕಾಗಿ ಆರೋಗ್ಯ ಸೇವೆಗಳಿಗೆ ಬಲ ತುಂಬಿದ ರಾಜ್ಯ ಬಜೆಟ್. 2024-25ನೇ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒಟ್ಟು ₹15,145 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಉತ್ತಮ ಆರೋಗ್ಯಯುತ ಕರ್ನಾಟಕ ನಿರ್ಮಾಣ ನಮ್ಮ ಆದ್ಯತೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.