alex Certify 16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 1 ಲಕ್ಷ ರೂ. ನೀಡಿ ಪ್ರಕರಣ ಮುಚ್ಚಿ ಹಾಕಲು ಮುಂದಾದ ಪಂಚಾಯ್ತಿ ಮುಖಂಡರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 1 ಲಕ್ಷ ರೂ. ನೀಡಿ ಪ್ರಕರಣ ಮುಚ್ಚಿ ಹಾಕಲು ಮುಂದಾದ ಪಂಚಾಯ್ತಿ ಮುಖಂಡರು

ಛತ್ತೀಸ್‌ಗಢದ ಜಶ್ಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅಷ್ಟೇ ಅಲ್ಲ 1 ಲಕ್ಷ ರೂಪಾಯಿ ಪರಿಹಾರ ಕೊಟ್ಟು ಪ್ರಕರಣವನ್ನೇ ಮುಚ್ಚಿ ಹಾಕಲು ಅಲ್ಲಿನ ಪಂಚಾಯ್ತಿ ಮುಖಂಡರು ಯತ್ನಿಸಿರೋದು ಸಹ ಬೆಳಕಿಗೆ ಬಂದಿದೆ.

ಜುಲೈ 9ರಂದು ಈ ಹೇಯ ಕೃತ್ಯ ನಡೆದಿದೆ. ಬಾಲಕಿ ಮದುವೆ ಸಮಾರಂಭವೊಂದನ್ನು ಮುಗಿಸಿಕೊಂಡು ಮನೆಗೆ ಬರುತ್ತಿದ್ಲು. ಈ ವೇಳೆ ಆಕೆಯನ್ನು ಅಡ್ಡಗಟ್ಟಿದ ನಾಲ್ವರು ಕಾಮುಕರು ಸಮೀಪದ ಕಾಡಿಗೆ ಎಳೆದೊಯ್ದಿದ್ದಾರೆ. ಅಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಘಟನೆ ಬಗ್ಗೆ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರೆಲ್ಲ ಸೇರಿ ಪಂಚಾಯ್ತಿ ಸೇರಿದ್ದಾರೆ. ಬಾಲಕಿಗೆ 1 ಲಕ್ಷ ರೂಪಾಯಿ ಪರಿಹಾರ ಕೊಟ್ಟು ಪ್ರಕರಣವನ್ನೇ ಮುಚ್ಚಿ ಹಾಕಲು ತಂತ್ರ ರೂಪಿಸಿದ್ದಾರೆ. ತಾನು ತಪ್ಪು ಮಾಡಿರೋದಾಗಿ ಆರೋಪಿ ಪಂಚಾಯ್ತಿ ಮುಂದೆ ಒಪ್ಪಿಕೊಂಡಿದ್ದ. ತಕ್ಷಣಕ್ಕೆ 10 ಸಾವಿರ ರೂಪಾಯಿ ಕೊಟ್ಟು, ಬಾಕಿ ಹಣವನ್ನು ನಂತರ ಕೊಡುವುದಾಗಿ ಹೇಳಿದ್ದ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅತ್ಯಾಚಾರಕ್ಕೊಳಗಾದ ಬಾಲಕಿ ಮತ್ತವಳ ತಂದೆಯ ಹೇಳಿಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಗ್ರಾಮಸ್ಥರನ್ನೂ ಬಂಧಿಸಲು ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...