alex Certify ಟ್ರಕ್, ಬಸ್ ನಡುವೆ ಅಪಘಾತ – ಸಾವಿನ ಸಂಖ್ಯೆ 16ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್, ಬಸ್ ನಡುವೆ ಅಪಘಾತ – ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೊರಟಿದ್ದ ಟ್ರಕ್ ಹಾಗೂ ಬಸ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಲ್ಲದೇ, 26 ಜನರ ಸ್ಥಿತಿ ಇನ್ನೂ ಗಂಭೀರವಾಗಿದೆ.

ಜಾರ್ಖಂಡ್ ನ ಪದೇರ್ಕೊ ಎಂಬಲ್ಲಿ ಈ ಘಟನೆ ನಡೆದಿದ್ದು, ದಟ್ಟವಾದ ಮಂಜು ಆವರಿಸಿದ್ದರಿಂದಾಗಿ ಎರಡು ವಾಹನಗಳಿಗೆ ಎದುರು ಬರುವ ವಾಹನ ಗೊತ್ತಾಗಿಲ್ಲ. ಆದರೂ ಎರಡು ವಾಹನಗಳು ಜೋರಾಗಿ ಬರುತ್ತಿದ್ದಂತೆ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ನಡೆದಿದೆ.

ವಾಹನಗಳು ಜೋರಾಗಿ ಬಂದ ಹಿನ್ನೆಲೆಯಲ್ಲಿ ಎರಡೂ ವಾಹನಗಳು ಸಿಕ್ಕಿಹಾಕಿಕೊಂಡಿವೆ. ಬಸ್ ನಲ್ಲಿ 40 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ನಲ್ಲಿಯೇ ಹಲವರು ಸಿಲುಕಿ ಹಾಕಿಕೊಂಡಿದ್ದರು. ಸದ್ಯ ಅವರೆಲ್ಲರನ್ನೂ ರಕ್ಷಿಸಲಾಗಿದ್ದು, 26 ಜನ ಗಾಯಾಳುಗಳ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಡೆಯುತ್ತಿದ್ದಂತೆ 10 ಜನ ಸಾವನ್ನಪ್ಪಿದ್ದರು. ಗಾಯಾಳುಗಳೆಲ್ಲರನ್ನೂ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಸಂಜೆಯ ವೇಳೆಗೆ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆ ಕಂಡಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...