alex Certify BIG NEWS: ಸುಳ್ಳು ಸುದ್ದಿ ಹರಡುತ್ತಿದ್ದ 16 ಯುಟ್ಯೂಬ್ ಚಾನೆಲ್‌ಗಳ ಮೇಲೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಳ್ಳು ಸುದ್ದಿ ಹರಡುತ್ತಿದ್ದ 16 ಯುಟ್ಯೂಬ್ ಚಾನೆಲ್‌ಗಳ ಮೇಲೆ ನಿರ್ಬಂಧ

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದ ಪಾಕಿಸ್ತಾನ ಮೂಲದ 6 ಚಾನೆಲ್‌ಗಳು ಮತ್ತು ಒಂದು ಫೇಸ್‌ಬುಕ್ ಖಾತೆ ಸೇರಿದಂತೆ 16 ಯುಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೋಮವಾರ ಹೇಳಿದೆ.

ನಿರ್ಬಂಧಿಸಲಾದ ಸಾಮಾಜಿಕ ಮಾಧ್ಯಮ ಖಾತೆಗಳು 68 ಕೋಟಿಗೂ ಹೆಚ್ಚು ಸಂಚಿತ ವೀಕ್ಷಕರನ್ನು ಹೊಂದಿವೆ. ರಾಷ್ಟ್ರೀಯ ಭದ್ರತೆ, ಭಾರತದ ವಿದೇಶಿ ಸಂಬಂಧಗಳು, ದೇಶದಲ್ಲಿ ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲು ಈ ಚಾನಲ್‌ಗಳನ್ನು ಬಳಸಲಾಗಿದೆ ಎಂದು ತಿಳಿದು ಬಂದಿದೆ ಎಂದು ಸಚಿವಾಲಯ ತಿಳಿಸಿದೆ.

ಅಲ್ಲದೇ ಯಾವುದೇ ಡಿಜಿಟಲ್ ಸುದ್ದಿ ಪ್ರಕಾಶಕರು ಐಟಿ ನಿಯಮಗಳು, 2021 ರ ನಿಯಮ 18 ರ ಅಡಿಯಲ್ಲಿ ಈ ಕುರಿತಾಗಿ ಸಚಿವಾಲಯಕ್ಕೆ ಮಾಹಿತಿ ನೀಡಿಲ್ಲ. ಭಾರತ ಮೂಲದ ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕಟಿಸಿದ ವಿಷಯವು ಒಂದು ಸಮುದಾಯವನ್ನು ಭಯೋತ್ಪಾದಕರು ಎಂದು ಉಲ್ಲೇಖಿಸುತ್ತದೆ ಮತ್ತು ವಿವಿಧ ಧಾರ್ಮಿಕ ಸಮುದಾಯಗಳ ಸದಸ್ಯರ ನಡುವೆ ದ್ವೇಷವನ್ನು ಪ್ರಚೋದಿಸುತ್ತದೆ. ಅಂತಹ ವಿಷಯವು ಕೋಮು ಸೌಹಾರ್ದತೆಯನ್ನು ಹಾಳುಗೆಡಹುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಕಂಡುಬಂದಿದೆ ಎಂದು ಸಚಿವಾಲಯ ಹೇಳಿದೆ.

ಈ ತಿಂಗಳ ಆರಂಭದಲ್ಲಿ, ಸಚಿವಾಲಯವು 22 ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಿದೆ, ಜೊತೆಗೆ ತಪ್ಪು ಮಾಹಿತಿ ಹರಡುತ್ತಿದ್ದ ಮೂರು ಟ್ವಿಟರ್ ಖಾತೆಗಳು ಮತ್ತು ಒಂದು ಫೇಸ್‌ಬುಕ್ ಖಾತೆಯನ್ನು ನಿರ್ಬಂಧಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...