ದಕ್ಷಿಣ ಆಫ್ರಿಕಾದ ಪೂರ್ವ ಕೇಪ್‌ನ ಗ್ರಾಮೀಣ ಪಟ್ಟಣವಾದ ಲುಸಿಕಿಸಿಕಿಯಲ್ಲಿ ನಡೆದ ಎರಡು ಗುಂಡಿನ ದಾಳಿಯಲ್ಲಿ 15 ಮಹಿಳೆಯರು ಸೇರಿದಂತೆ 17 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಶುಕ್ರವಾರ ರಾತ್ರಿ ನಡೆದ ಘಟನೆಗಳು ಸಮುದಾಯವನ್ನು ಬೆಚ್ಚಿ ಬೀಳಿಸಿದೆ. ದಕ್ಷಿಣ ಆಫ್ರಿಕಾದ ಲುಸಿಕಿಸಿಕಿಯಲ್ಲಿ ಗುಂಡಿನ ದಾಳಿಯಲ್ಲಿ 15 ಮಹಿಳೆಯರು ಸೇರಿದಂತೆ 17 ಜನರು ಸಾವನ್ನಪ್ಪಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ರಾಜ್ಯ ಪೊಲೀಸ್ ವಕ್ತಾರ ಬ್ರಿ. ಎತ್ಲೆಂಡಾ ಮಾತೆ, ಶಂಕಿತ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ 15 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಂದು ಮನೆಯಲ್ಲಿ 12 ಮಹಿಳೆಯರು ಮತ್ತು ಒಬ್ಬ ಪುರುಷ ಮತ್ತು ಎರಡನೇ ಮನೆಯಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.